Breaking

Monday, 3 January 2022

All Awards List given by Karnataka State Government For All Competitive Examinations

 All Awards List given by Karnataka State Government For All Competitive Examinations 
ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರಶಸ್ತಿಗಳ ಪಟ್ಟಿ 

All Awards List given by Karnataka State Government For All Competitive Examinations ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರಶಸ್ತಿಗಳ ಪಟ್ಟಿ


ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರಮುಖ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ.

ಸ್ನೇಹಿತರೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶಸ್ತಿಗಳ ವಿಭಾಗಕ್ಕೆ ಸಂಬಂಧಪಟ್ಟಂತೆ ಪ್ರಮುಖವಾಗಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅದರಲ್ಲಿಯೂ ವಿಶೇಷವಾಗಿ ಕರ್ನಾಟಕ ರಾಜ್ಯ ಸರ್ಕಾರ ನಡೆಸುವ ಹಲವಾರು ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ಪ್ರಶಸ್ತಿಗಳ ವಿಭಾಗಕ್ಕೆ ಸಂಬಂಧಿಸಿದ ಪ್ರಶ್ನೆಗಳು ಇರುತ್ತವೆ. ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಮುಖ ಪರೀಕ್ಷೆಗಳಾದ ಕೆಎಎಸ್, ಎಫ್ಡಿಎ, ಎಸ್ ಡಿ ಎ ಗ್ರೂಪ್-ಸಿ, ಹಾಸ್ಟೆಲ್ ವಾರ್ಡನ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನಡೆಸುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳು ಸೇರಿದಂತೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಲ್ಲಿ ಪ್ರಶಸ್ತಿಗಳ ವಿಭಾಗದಲ್ಲಿ ಹಲವಾರು ಪ್ರಶ್ನೆಗಳು ಬರುವ ಸಾಧ್ಯತೆಗಳು ಇರುತ್ತದೆ.

ಅಲ್ಲದೆ ಕೇಂದ್ರ ಲೋಕಸೇವಾ ಆಯೋಗ ನಡೆಸುವಂತಹ ಕೇಂದ್ರೀಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಈ ಪ್ರಶಸ್ತಿಗಳ ಬಗ್ಗೆ ಸರ್ವೇಸಾಮಾನ್ಯವಾಗಿ ಪ್ರಶ್ನೆಗಳು ಬಂದೇ ಬರುತ್ತವೆ. ಆದ್ದರಿಂದ ಇವತ್ತಿನ ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಸರ್ಕಾರ ನೀಡುವಂತಹ ಪ್ರಮುಖ ಪ್ರಶಸ್ತಿಗಳು ಹಾಗೂ ಅವುಗಳನ್ನು ಯಾವ ವರ್ಷದಿಂದ ನೀಡಲಾಗುತ್ತಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ.

💥 ಕರ್ನಾಟಕ ರಾಜ್ಯ ಸರ್ಕಾರ ನೀಡುವಂತಹ ಎಲ್ಲ ಪ್ರಮುಖ ಪ್ರಶಸ್ತಿಗಳ ಪಟ್ಟಿ ಈ ಕೆಳಗಿನಂತಿದೆ 💥



ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರಶಸ್ತಿಗಳ ಪಟ್ಟಿ
ಕ್ರಮ.ಸಂಖ್ಯೆ ಪ್ರಶಸ್ತಿಯ ಹೆಸರು ನೀಡುವ ಸಂಸ್ಥೆ ಪ್ರಾರಂಭ
01 ಕರ್ನಾಟಕ ರತ್ನ ಪ್ರಶಸ್ತಿ, ಕರ್ನಾಟಕ ಸರ್ಕಾರ 1992
02 ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರ 1966
03 ಬಸವ ಪುರಸ್ಕಾರ ಕರ್ನಾಟಕ ಸರ್ಕಾರ 2000
04 ಟಿ. ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ ಕರ್ನಾಟಕ ಸರ್ಕಾರ 1995
05 ಕನಕಶ್ರೀ ಪ್ರಶಸ್ತಿ ಕರ್ನಾಟಕ ಸರ್ಕಾರ 2008
06 ಶ್ರೀ ನಿಜಗುಣ ಪುರಂದರ ಪ್ರಶಸ್ತಿ ಕರ್ನಾಟಕ ಸರ್ಕಾರ 1991
07 ಡಾ: ಗುಬ್ಬಿವೀರಣ್ಣ ಪ್ರಶಸ್ತಿ ಕರ್ನಾಟಕ ಸರ್ಕಾರ 1994
08 ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಕರ್ನಾಟಕ ಸರ್ಕಾರ 1993
09 ಜಾನಪದಶ್ರೀ ಪ್ರಶಸ್ತಿ ಕರ್ನಾಟಕ ಸರ್ಕಾರ 1994
10 ಶಾಂತಲಾ ನಾಟ್ಯ ಪ್ರಶಸ್ತಿ ಕರ್ನಾಟಕ ಸರ್ಕಾರ 1995
11 ಜಕಣಾಚಾರಿ ಪ್ರಶಸ್ತಿ ಕರ್ನಾಟಕ ಸರ್ಕಾರ 1995
12 ಸಂತ ಶಿಶುನಾಳ ಷರೀಫ ಪ್ರಶಸ್ತಿ ಕರ್ನಾಟಕ ಸರ್ಕಾರ 1995
13 ಕುಮಾರವ್ಯಾಸ ಪ್ರಶಸ್ತಿ ಕರ್ನಾಟಕ ಸರ್ಕಾರ 1995
14 ಪಂಪ ಪ್ರಶಸ್ತಿ ಕರ್ನಾಟಕ ಸರ್ಕಾರ 1987
15 ಪ್ರೊ ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ಕರ್ನಾಟಕ ಸರ್ಕಾರ 2010-11
16 ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಕರ್ನಾಟಕ ಸರ್ಕಾರ 1995
17 ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಕರ್ನಾಟಕ ಸರ್ಕಾರ -
18 ಬಿ.ವಿ. ಕಾರಂತ ಪ್ರಶಸ್ತಿ ಕರ್ನಾಟಕ ಸರ್ಕಾರ 2014
19 ರಾಜ್ಯ ಸಂಗೀತ ವಿದ್ವಾನ್ ಗೌರವ ಪ್ರಶಸ್ತಿ ಕರ್ನಾಟಕ ಸರ್ಕಾರ 1993
20 ಅಕ್ಕಮಹಾದೇವಿ ಪ್ರಶಸ್ತಿ ಕರ್ನಾಟಕ ಸರ್ಕಾರ 2016
21 ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ಕರ್ನಾಟಕ ಸರ್ಕಾರ 2016

No comments:

Post a Comment

Important Notes

Random Posts

Important Notes

Popular Posts